ಮಡಿಕೇರಿ, ಜು. 14 : ವೀರಾಜಪೇಟೆ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಸದರಿ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ 1977 ರನ್ವಯ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ಸ್ವೀಕರಿಸಲಾಗುವುದು. ತಾ. 24 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.