ಕೂಡಿಗೆ, ಜು. 13: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೂಡಿಗೆಯ ಮೊರಾರ್ಜಿ ವಸತಿ ಶಾಲೆ ಬಾಲಕರ ಮತ್ತು ಬಾಲಕಿಯರ ವಸತಿ ಗೃಹ ಗಳನ್ನು ಕೊರೊನಾ ಕೇರ್ ಸೆಂಟರ್ ಆಗಿ ಮಾಡುವ ಉದ್ದೇಶದಿಂದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಇಂದು ಕೂಡಿಗೆಯ ಮೊರಾರ್ಜಿ ವಸತಿ ಶಾಲೆಗೆ ಸೋಮವಾರಪೇಟೆ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್, ತಾಲೂಕು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿ ಶೇಖರ್, ಕುಶಾಲನಗರ ಹೋಬಳಿ ಕಂದಾಯ ಪರಿವೀಕ್ಷಕ ಮಧುಕುಮಾರ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಖೇಶ್, ಮತ್ತು ರಾಜಶೇಖರ, ಅಯಿಷಾ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದರು.