*ಸಿದ್ದಾಪುರ, ಜು.13: ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಅತ್ತಿಮಂಗಲ, ನಲ್ವತ್ತೆಕರೆ, ಬರಡಿ ಮುಖ್ಯ ರಸ್ತೆಯಲ್ಲಿ ಜನರ ಸಂಚಾರಕ್ಕೆ ಅಡಚಣೆಯಾಗಿರುವ ಬೇಲಿಯ ತೆರವು ಕಾರ್ಯಾಚರಣೆ ಇನ್ನೂ ನಡೆಯದೆ ಇರುವುದರಿಂದ ಗ್ರಾಮಸ್ಥರು ತೀವ್ರ ಅಸಮಾಧಾನಗೊಂಡಿದ್ದಾರೆ.

ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸುನೀಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಎರಡು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಷ್ಟು ದಿನಗಳೇ ಕಳೆದರೂ ಬೇಲಿ ತೆರವುಗೊಳ್ಳದೇ ಇರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತ ಹೋರಾಟ ಸಮಿತಿ ಹಾಗೂ ಗ್ರಾಮಸ್ಥರು ತಾ.14 ರಂದು (ಇಂದು) ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡಲು ನಿರ್ಧರಿಸಿದ್ದಾರೆ. ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಈ ಸಂಬಂಧ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.