ಮಡಿಕೇರಿ, ಜು. 14: ಪ್ರಧಾನಮಂತ್ರಿ ಮಾತೃವಂದನಾ ಮತ್ತು ಪೋಷಣ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ 18 ರಿಂದ 35 ವರ್ಷ ವಯೋಮಿತಿಗೊಳಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ, ವಿದ್ಯಾರ್ಹತೆ: ಸಮಾಜ ವಿಜ್ಞಾನ/ ಜೀವ ವಿಜ್ಞಾನ/ ನ್ಯೂಟ್ರಿಷನ್/ ವೈದ್ಯಕೀಯ/ ಆರೋಗ್ಯ ನಿರ್ವಹಣೆ/ ಸಮಾಜ ಕಾರ್ಯ/ ರೂರಲ್ ಮ್ಯಾನೇಜ್ಮೆಂಟ್ ಇವುಗಳಲ್ಲಿ ಯಾವುದಾದರೊಂದು ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸೇವಾ ಅನುಭವ: ಸರ್ಕಾರಿ/ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ 1 ವರ್ಷಗಳ ಅನುಭವ, ಎಂ.ಎಸ್. ಆಫೀಸ್ ಬಳಕೆ ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಕ್ಷೇತ್ರ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು. ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು. ಗೌರವಧನ ಮಾಹೆಯಾನ ರೂ. 35 ಸಾವಿರ.
ವೀರಾಜಪೇಟೆ ತಾಲೂಕು ಸಂಯೋಜಕರು: ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಅಥವಾ ಐ.ಟಿ. ಪದವಿ ಅಥವಾ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) ಪದವಿ ಪಡೆದಿರಬೇಕು. ಸೇವಾ ಅನುಭವ: ಟೆಕ್ನಾಲಜಿ ಅಂಡ್ ಸಾಫ್ಟ್ವೇರ್ ಅಪ್ಲಿಕೇಷನ್ ಸಪೋರ್ಟ್ನಲ್ಲಿ ಕನಿಷ್ಟ 2 ವರ್ಷಗಳು ಕೆಲಸ ನಿರ್ವಹಿಸಿದ ಅನುಭವ ಇರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಕ್ಷೇತ್ರ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು. ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು. ಗೌರವಧನ ಮಾಹೆಯಾನ ರೂ. 20 ಸಾವಿರ.
ಆಸಕ್ತ ಅರ್ಹ ಅಭ್ಯರ್ಥಿಗಳು ಸ್ವವಿವರವನ್ನು ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ. ಈ ವಿಳಾಸಕ್ಕೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ 08272-298379 ರಲ್ಲಿ ಸಂಪರ್ಕಿಸಬಹುದು.