ಸೋಮವಾರಪೇಟೆ,ಜು.14: ಅಕ್ರಮವಾಗಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ಸೋಮವಾರಪೇಟೆ ಪೊಲೀಸರು ಧಾಳಿ ನಡೆಸಿ ಪಣಕ್ಕಿಟ್ಟಿದ್ದ ರೂ. 10,020 ನಗದು ಸೇರಿದಂತೆ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.
ತಾಲೂಕಿನ ಕೂಗೇಕೋಡಿ ಸಮೀಪದ ಸಬ್ಬನಕೊಪ್ಪ ಸಂಘದ ಕಟ್ಟಡದ ಮುಂಭಾಗ ಅಕ್ರಮವಾಗಿ ಜೂಜಾಡುತ್ತಿದ್ದ 8 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಮಾರ್ಗದರ್ಶನ, ಠಾಣಾಧಿಕಾರಿ ಶಿವಶಂಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ನವೀನ್, ಜಗದೀಶ್, ಬಸಪ್ಪ, ವಸಂತ್ ಅವರುಗಳು ಭಾಗವಹಿಸಿದ್ದರು.