ಮಡಿಕೇರಿ, ಜು. 13 : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಸಂತ ಮೈಕಲರ ಶಾಲಾ ಸಂಕೀರ್ಣದೊಳಗೆ ಪ್ರಸ್ತುತ ಸಾಲಿನಲ್ಲಿ ಪರೀಕ್ಷೆ ಬರೆದಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯದ ಮೌಲ್ಯಮಾಪನ ಇಂದಿನಿಂದ ಆರಂಭಗೊಂಡಿದೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವ 640 ಮಂದಿ ಶಿಕ್ಷಕರು ಈ ಮೌಲ್ಯಮಾಪನ ನಡೆಸುತ್ತಿದ್ದಾರೆ.

ಶಾಲೆಯ 6 ಕಡೆಗಳಲ್ಲಿ ಪ್ರತಿಯೊಂದು ಕೊಠಡಿಗೆ 18 ಶಿಕ್ಷಕರಂತೆ ಪರಸ್ಪರ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯೊಂದಿಗೆ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಕ್ರಮಕೈಗೊಳ್ಳಲಾಗಿದೆ.

ಮುಂದಿನ ಒಂದು ವಾರದೊಳಗೆ ಈ ಕೆಲಸ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ `ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿದ್ದಾರೆ.