ಮಡಿಕೇರಿ, ಜು. 14: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಕೋವಿಡ್ ಹೆಲ್ತ್ ಸೆಂಟರ್, ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಕೋವಿಡ್-19ರ ಸಲುವಾಗಿ ಪಿ.ಪಿ.ಇ. ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್-1 ನೌಕರರುಗಳೀಗೆ ಮಾಸಿಕ ರೂ. 10,000 ಕೋವಿಡ್ ರಿಸ್ಕ್ ಪ್ರೋತ್ಸಾಹಧನವನ್ನು ಮುಂದಿನ 6 ತಿಂಗಳುಗಳಿಗೆ ಅಥವಾ ಮುಂದಿನ ಆದೇಶದವರೆಗೆ ನೀಡಲು ಸರಕಾರ ತೀರ್ಮಾನಿಸಿ ಆದೇಶ ಹೊರಡಿಸಿದೆ.