ಕೂಡಿಗೆ, ಜು. 14: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೂಸೂರು ಗ್ರಾಮದಿಂದ ಕಣಿವೆಯ ಹಾಸನ ಹೆದ್ದಾರಿಯ ರಸ್ತೆಯವರೆಗೆ ರಸ್ತೆಯು ತೀರಾ ಹಾಳಾಗಿದ್ದು, ಸಣ್ಣ ವಾಹನಗಳ ಸಂಚಾರಕ್ಕೂ ತೊಂದರೆ ಆಗುತ್ತಿದ್ದು, ಇದನ್ನು ಸರಿಪಡಿಸುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಸಂಬಂಧಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆಯ ದುರಸ್ತಿಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಈ ವ್ಯಾಪ್ತಿಯ ಸಹಕಾರ ಸಂಘದ ನಿರ್ದೇಶಕ ವಿಶ್ವನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳಾದ ಮಂಜಯ್ಯ, ಕೃಷ್ಣ ಸೇರಿದಂತೆ ಅನೇಕ ಗ್ರಾಮಸ್ಥರು ಆಗ್ರಹಿಸಿದ್ದಾರೆ.