ಶನಿವಾರಸಂತೆ, ಜು. 15: ಶಿವಪುರ ಗ್ರಾಮದಲ್ಲಿ ತಾ. 14 ರಂದು ಬೆಳಿಗ್ಗೆ ಜೋಳದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪಾಲಾಕ್ಷ (65) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ದೊರೆತ ಪುಕಾರಿನ ಮೇರೆ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಶನಿವಾರಸಂತೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿ, ಶನಿವಾರಸಂತೆ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಹೆಚ್.ಎಂ. ಗೋವಿಂದ್ ಪ್ರಕರಣ ದಾಖಲಿಸಿದ್ದಾರೆ.