ಶ್ರೀಮಂಗಲ, ಜು. 15: ಕುಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಮತ್ತು ನರ್ಸ್‍ಗಳಿಗೆ ಸನ್ಮಾನ ಮಾಡಿ, ತಲಾ ರೂ. 3000 ದಂತೆ ಪೆÇ್ರೀತ್ಸಾಹ ಧನವನ್ನು ಸಂಘದ ವತಿಯಿಂದ ಆಯೋಜಿಸಿದ ಸಮಾರಂಭದಲ್ಲಿ ನೀಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ಮಚ್ಚಮಾಡ ಬಿ. ಸುಬ್ರಮಣಿ, ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಸಂದರ್ಭದಲ್ಲಿ ಸತತವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರು ಹಾಗೂ ನರ್ಸ್‍ಗಳು ಸಮಾಜದ ಜನರ ಆರೋಗ್ಯಕ್ಕಾಗಿ ಶ್ರಮಿಸುವ ಸಂದರ್ಭ ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು, ನಿಮ್ಮ ಆರೋಗ್ಯ ಸೇವೆ ಪ್ರಶಂಸನೀಯವಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 4 ಆಶಾ ಕಾರ್ಯಕರ್ತೆ ಯರಿಗೆ, ಕುಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 6 ಆಶಾ ಕಾರ್ಯಕರ್ತೆಯರು ಹಾಗೂ 6 ನರ್ಸ್‍ಗಳಿಗೆ ತಮ್ಮ ಅನುದಾನದಲ್ಲಿ ಒಟ್ಟು 16 ಜನರಿಗೆ ಪೆÇ್ರೀತ್ಸಾಹ ಧನ ನೀಡಲಾಯಿತು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಾಚಿಮಾಡ ಸಿ. ನಾಣಯ್ಯ ಸಂಘದ ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಹೊಟ್ಟೇಂಗಡ ಎಂ. ರಮೇಶ್ ಹಾಗೂ ಎಲ್ಲಾ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಬೇಬಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.