ಮಡಿಕೇರಿ, ಜು. 15: ಜಿಲ್ಲೆಯಲ್ಲಿ ತಾ. 15ರಂದು ಒಟ್ಟಾರೆ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 225 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 87 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 135 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ ಮೂವರು ಮೃತಪಟ್ಟಿದ್ದು, ಜಿಲ್ಲೆಯಾದ್ಯಂತ ಒಟ್ಟು 100 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ ಇಂದು ವೀರಾಜಪೇಟೆ ತಾಲೂಕು ಬಾಡಗ ಬಾಣಂಗಾಲ ಗ್ರಾಮದ ಹುಂಡಿ ಪ್ರದೇಶದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ಪ್ರಕರಣದ ಪ್ರಾಥಮಿಕ ಸಂಪರ್ಕವಾದ 19 ವಷರ್Àದ ಹುಡುಗನಿಗೆ ಸೋಂಕು ದೃಢಪಟ್ಟಿದೆ. ಮೈಸೂರಿನ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕವಾದ ಸೋಮವಾರಪೇಟೆ ತಾಲೂಕು ನಂಜರಾಯಪಟ್ಟಣದ ರಸೂಲ್ ಬೆಟ್ಟಗೇರಿ ಗ್ರಾಮದ ನಿವಾಸಿ 65 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 7 ವಷರ್Àದ ಬಾಲಕನಿಗೆ ಸೋಂಕು ದೃಢಪಟ್ಟಿದೆ.
ಅಂತರ್ ಜಿಲ್ಲಾ ಪ್ರಯಾಣದ ಹಿನ್ನೆಲೆ ಇರುವ ವೀರಾಜಪೇಟೆ ತಾಲೂಕಿನ
(ಮೊದಲ ಪುಟದಿಂದ) ನಿರ್ಮಲಗಿರಿ, ಹೆಗ್ಗಳ ಗ್ರಾಮದ ನಿವಾಸಿಯಾದ 45 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಪೆರುಂಬಾಡಿಯ ನಿವಾಸಿ 43 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಿಗೆ ಬೆಂಗಳೂರು ಪ್ರಯಾಣ ಮಾಡಿರುವ ಹಿನ್ನೆಲೆ ಇದೆ.
ಪ್ರಸ್ತುತ ಮಡಿಕೇರಿ ನಗರದ ಕಾನ್ವೆಂಟ್ ರಸ್ತೆಯಲ್ಲಿ ವಾಸವಿರುವ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ ಪೆÇಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 45 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿ ನಗರದ ಮುನೀಶ್ವರ ದೇವಸ್ಥಾನದ ಹಿಂಭಾಗದ ಸಿಬ್ಬಂದಿ ವಸತಿ ಗೃಹದ ನಿವಾಸಿ ಆರೋಗ್ಯ ಕಾರ್ಯಕರ್ತರಾಗಿರುವ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಬಲಮುರಿ ದೇವಸ್ಥಾನದ ಬಳಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 37 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.