ಶನಿವಾರಸಂತೆ, ಜು. 15: ಅಕ್ರಮವಾಗಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ಶನಿವಾರಸಂತೆ ಪೊಲೀಸರು ದಾಳಿ ನಡೆಸಿ ಪಣಕ್ಕಿಟ್ಟಿದ್ದ ರೂ. 29,500 ನಗದು ಸೇರಿದಂತೆ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.

ಗುಡುಗಳಲೆಯ ಹುಲುಸೆ ಗ್ರಾಮದಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆ ಅವರ ಮಾರ್ಗದರ್ಶನದಲ್ಲಿ ಶನಿವಾರಸಂತೆ ಪೊಲೀಸರು ಇಸ್ಪಿಟ್ ಅಡ್ಡೆಗೆ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಿ ಕಣದಲ್ಲಿದ್ದ ರೂ. 29,500 ವಶಪಡಿಸಿಕೊಂಡು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

ಕಾರ್ಯಾಚರಣೆಯಲ್ಲಿ ಪೊಲೀಸ್ ಠಾಣಾಧಿಕಾರಿ ದೇವರಾಜ್, ಹೆಡ್‍ಕಾನ್ಸ್‍ಟೇಬಲ್‍ಗಳಾದ ಶಶಿಕುಮಾರ್, ರವಿಚಂದ್ರ, ಬೋಪಣ್ಣ, ವಿವೇಕ್, ಸಿಬ್ಬಂದಿಗಳಾದ ಶಫೀರ್, ವಿನಯ, ಇತರರು ಭಾಗವಹಿಸಿದ್ದರು.