ಕುಶಾಲನಗರ, ಜು. 12 : ಸಿಇಟಿ ಪರೀಕ್ಷೆಗಳು ಈ ತಿಂಗಳ 30 ಹಾಗೂ 31 ರಂದು ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಬದಲಾವಣೆ ಮಾಡಲು ಪರದಾಡುವ ಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಸಿಇಟಿ ಪರೀಕ್ಷೆ ದಿನಾಂಕ ನಿಗದಿಯಾಗುತ್ತಿದ್ದಂತೆ ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಿಂದ ಜಿಲ್ಲೆಗೆ ಬದಲಾಯಿಸಿಕೊಳ್ಳಲು ವಿದ್ಯಾರ್ಥಿಗಳು ಸಿಇಟಿ ಕೇಂದ್ರವನ್ನು ದೂರವಾಣಿ ಮೂಲಕ ಸಂಪರ್ಕಿಸಿದರೂ ಉತ್ತರ ದೊರೆಯುತ್ತಿಲ್ಲ.
ತಮ್ಮ ಮಕ್ಕಳಿಗೆ ಮಂಗಳೂರು ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಅವಕಾಶ ದೊರೆತಿದ್ದು ಅದನ್ನು ಜಿಲ್ಲೆಯ ಕೇಂದ್ರಕ್ಕೆ ವರ್ಗಾಯಿಸಲು ಹಲವು ಬಾರಿ ಸಂಪರ್ಕಕ್ಕೆ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದಿರುವ ಪೋಷಕರು ಈ ಬಗ್ಗೆ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.