ಪೊನ್ನಂಪೇಟೆ, ಜು. 16: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಾಮಥ್ರ್ಯವನ್ನು ಇನ್ನಷ್ಟು ಹೆಚ್ಚಿಸಬೇಕು. ಸೋಂಕು ಪರೀಕ್ಷಾ ವರದಿಯನ್ನು ದಿನದ 24 ಗಂಟೆಯೊಳಗೆ ನೀಡಬೇಕು ಎಂದು ಆಗ್ರಹಿಸಿರುವ ಜಿ.ಪಂ. ಸದಸ್ಯ ಬಿ.ಎನ್. ಪ್ರಥ್ಯು ಅವರು, ಇದಕ್ಕಾಗಿ ಚರ್ಚಿಸಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಿಲ್ಲಾಧಿಕಾರಿಗಳು ಕ್ಷೇತ್ರದ ಸಂಸದರನ್ನು ಮತ್ತು ಶಾಸಕರನ್ನು ಒಳಗೊಂಡಂತೆ ಜನಪ್ರತಿನಿಧಿಗಳ ವಿಶೇಷ ಸಭೆಯನ್ನು ತುರ್ತಾಗಿ ಕರೆಯಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.