ವೀರಾಜಪೇಟೆ, ಜು. 16 : ಬೆಂಗಳೂರಿನಿಂದ ಮೂರು ದಿನಗಳ ಹಿಂದೆ ಬಂದ ಇಲ್ಲಿನ ಅಪ್ಪಯ್ಯಸ್ವಾಮಿ ರಸ್ತೆಯ 26 ವರ್ಷದ ಯುವಕನಿಗೆ ಇಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆತನನ್ನು ಮನೆಯಲ್ಲಿಯೇ ಹೋಮ್ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಪಾಸಿಟಿವ್ ಬಂದ ಯುವಕನ ಮನೆಯನ್ನು ಇಂದು ಸೀಲ್‍ಡೌನ್ ಮಾಡಲಾಗಿದ್ದು ಈ ಮನೆಗೆ ತೆರಳುವ ರಸ್ತೆಗೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕ ಸಂಪರ್ಕದಿಂದ ತಡೆ ಹಿಡಿಯಲಾಗಿದೆ. ಶಿವಕೇರಿ ಜಂಕ್ಷನ್‍ನ ಒಳಗಡೆ ಒಂದೇ ಮನೆ ಇದ್ದುದರಿಂದ ಈ ಮನೆಯನ್ನು ಮಾತ್ರ ಲಾಕ್‍ಡೌನ್ ಮಾಡಲಾಗಿದೆ. ಮನೆ ಸೀಲ್‍ಡೌನ್ ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ಸಿಬ್ಬಂದಿಗಳು ಹಾಜರಿದ್ದರು.