ಮಡಿಕೇರಿ, ಜು. 16: ಕಾಡಾನೆಯೊಂದಿಗೆ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಗ್ಗೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಭಾರತೀಯ ಜನತಾ ಪಕ್ಷದ ಚೆಟ್ಟಳ್ಳಿ ಅಧ್ಯಕ್ಷ ಕಂಠಿ ಕಾರ್ಯಪ್ಪ ಅವರು ಚೆಟ್ಟಳ್ಳಿ ಪೆÇಲೀಸ್ ಉಪಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆÇನ್ನತ್‍ಮೊಟ್ಟೆ ಗ್ರಾಮದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ಕಾಡಾನೆಯೊಂದು ಹಿಂಬಾಲಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ಅದನ್ನ ಸೆಲ್ಫಿ ತೆಗೆದು ಪುಂಡಾಟಿಕೆ ಮೆರೆದಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಅಲ್ಲದೇ ಯುವಕ ನನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.