ಮಡಿಕೇರಿ, ಜು. 17: ಸರ್ಕಾರಿ ಪ್ರೌಢಶಾಲೆಗಳಲ್ಲಿ 2019ರ ಜನವರಿ 1 ರಲ್ಲಿದ್ದಂತೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯ ಕರಡನ್ನು ಇಲಾಖಾ ವೆಬ್‍ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ನು ಯಥಾವತ್ತಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲಿಸಬಹುದಾಗಿದೆ.

ಶಿಕ್ಷಕರುಗಳು ಕರಡು ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಮರ್ಥನಿಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಇಲಾಖಾ ಅಂತರ ಜಾಲದಲ್ಲಿ ಪ್ರಕಟಿಸಲಾದ ಪಟ್ಟಿಯಲ್ಲಿ ಹೆಸರು ಇರುವ ಪುಟದ ಮುದ್ರಿತ ಪ್ರತಿಯೊಂದಿಗೆ ತಾ. 20 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ/ ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವುದು. ನಿಗದಿತ ದಿನಾಂಕದೊಳಗೆ ಸಲ್ಲಿಕೆಯಾಗದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.