ಸೋಮವಾರಪೇಟೆ, ಜು. 17: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ಗೌರವ ಧನ ಘೋಷಿಸಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿ ನೀಡಬೇಕು. ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತೆಯರು, ಇನ್ನಾದರೂ ಈ ಬಗ್ಗೆ ಗಮನ ಹರಿಸಬೇಕೆಂದು ಶಾಂತಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಆಶಾ ಕಾರ್ಯಕರ್ತೆಯರಾದ ಸುಜಾತ, ದಿವ್ಯ, ಪಾವನ, ಅರ್ಪಿತ, ಬಿಂದು, ರಜಿನಿ ಉಪಸ್ಥಿತರಿದ್ದರು.