ನಾಪೆÇೀಕ್ಲು, ಜು. 17: ಕಳೆದ ಒಂದು ತಿಂಗಳಿನಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಕೋಕೇರಿ ಗ್ರಾಮದಲ್ಲಿ ಒಂದು ಮರಿಯಾನೆ ಸೇರಿದಂತೆ 4 ಕಾಡಾನೆಗಳ ಹಿಂಡು ಗ್ರಾಮಸ್ಥರ ಕಾಫಿ ತೋಟಗಳಲ್ಲಿ ಸಂಚರಿಸುತ್ತಿದ್ದು, ಅಪಾರ ಪ್ರಮಾಣದ ನಷ್ಟ ಉಂಟು ಮಾಡುತ್ತಿವೆ.

ಬುಧವಾರ ರಾತ್ರಿ ಗ್ರಾಮದ ಮಚ್ಚಂಡ ಸುಮತಿ ಎಂಬವರ ತೋಟಕ್ಕೆ ಧಾಳಿಯಿಟ್ಟ ಕಾಡಾನೆಗಳ ಹಿಂಡು ಕಾಫಿ ಗಿಡಗಳು ಸೇರಿದಂತೆ ಬಾಳೆ, ತೆಂಗು, ಅಡಿಕೆ ಫಸಲನ್ನು ಸಂಪೂರ್ಣವಾಗಿ ನಾಶಗೊಳಿಸಿದೆ ಎಂದು ಅವರು ‘ಶಕ್ತಿ’ಗೆ ಮಾಹಿತಿ ನೀಡಿದ್ದಾರೆ.

ಕಾಡಾನೆ ಭೀತಿಯಿಂದ ಜನ ಕಂಗಾಲಾಗಿದ್ದು, ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರು ಕೂಡ ಬರಲು ಹಿಂದೇಟು ಹಾಕುತ್ತಿದ್ದಾರೆ. ಆದುದರಿಂದ ಈ ಕಾಡಾನೆ ಹಾವಳಿಯನ್ನು ತಪ್ಪಿಸಲು ಸರಕಾರ, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂದು ಈ ವ್ಯಾಪ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.