ಮಡಿಕೇರಿ, ಜು.17: ಫೆಬ್ರವರಿ ತಿಂಗಳಿನಲ್ಲಿ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ದುಬಾರೆಯಲ್ಲಿ ನೀರಿನಲ್ಲಿ ಮುಳುಗಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರು. ಈ ಇಬ್ಬರು ಮೃತ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ತಲಾ 1 ಲಕ್ಷ ರೂ., ಶಾಲಾ ವ್ಯವಸ್ಥಾಪನಾ ಮಂಡಳಿಯಿಂದ ತಲಾ 7 ಲಕ್ಷ ರೂ., ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್ ಮಚ್ಚಾಡೋ ಅವರು ತಿಳಿಸಿದ್ದಾರೆ.