ಸೋಮವಾರಪೇಟೆ, ಜು. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ಯೋಜನೆಯ ಸದಸ್ಯರು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಸುಶೀಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂತಳ್ಳಿ ವಲಯ ಮೇಲ್ವಿಚಾರಕ ಸುಬ್ರಮಣ್ಯ, ಚೌಡ್ಲು ಸೇವಾ ಪ್ರತಿನಿಧಿ ವಿ. ಪುಷ್ಪಾವತಿ, ಒಕ್ಕೂಟದ ಅಧ್ಯಕ್ಷೆ ಲತಾ, ನವಜೀವನ ಸಮಿತಿಯ ಸದಸ್ಯರಾದ ರಾಮ್ದಾಸ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.