ಮಡಿಕೇರಿ, ಜು. 19: ನಗರದ ರಾಘವೇಂದ್ರ ದೇವಾಲಯ ಬಳಿಯಿಂದ ಮುಖ್ಯರಸ್ತೆಗೆ ಸಾಗುವ ಕಾಂಕ್ರೀಟ್ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡು ಮಳೆಯ ನಡುವೆ ಕುಸಿಯುವ ಅಪಾಯ ಎದುರಾಗಿದೆ. ಈ ಬಗ್ಗೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ತುರ್ತು ಗಮನಹರಿಸಿ, ಸಾರ್ವಜನಿಕರ ನಿತ್ಯ ಸಂಚಾರಕ್ಕೆ ತೊಂದರೆ ಎದುರಾಗುವ ಮುನ್ನ ಸರಿಪಡಿಸುವಂತೆ ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಈ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದರೆ ಸ್ಥಳೀಯರ ನಿತ್ಯ ಓಡಾಟಕ್ಕೆ ತೀವ್ರ ಸಮಸ್ಯೆ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.