ಮಡಿಕೇರಿ, ಜು. 19: ಕೊಡಗು ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಕೋವಿಡ್ ಆಸ್ಪತ್ರೆ ಮತ್ತು ಕೋವಿಡೇತರ ಸೇವೆಗಳನ್ನು ನಿರ್ವಹಿಸುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದೆ.

ಈ ಎರಡೂ ಇಲಾಖೆಗಳಲ್ಲಿ ಸರ್ಕಾರದಿಂದ ಮಂಜೂರಾದ ವೈದ್ಯರ ಹುದ್ದೆಗಳ ಪೈಕಿ 120 ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳಿಗೆ ಎದುರಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತರು ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಾ:ಕಾರ್ಯಪ್ಪ, ಡೀನ್ ಮತ್ತು ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ (ಮೊ: 9845431984) ಇವರನ್ನು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ರಾಜೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಡಿಕೇರಿ (ಮೊ:9448422302) ಇವರನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ.