ಕೂಡಿಗೆ, ಜು. 19: ಕುಶಾಲನಗರ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಕೊರೊನಾ ಸೋಂಕಿತ ವ್ಯಕ್ತಿಗಳ ಸಂಖ್ಯೆ ಕಂಡುಬರುತ್ತಿರುವ ಹಿನ್ನೆಲೆ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯವರು ಆಯಾ ಗ್ರಾಮಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಹೆಬ್ಬಾಲೆ, ಶಿರಂಗಾಲ, ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮದ ಪ್ರದೇಶಗಳಲ್ಲಿ ಸೀಲ್‍ಡೌನ್ ಆಗಿದ್ದು, ಈ ಹಿನ್ನೆಲೆ ಎಲ್ಲಾ ಗ್ರಾಮಗಳಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವರು ಸೇರಿ ಸ್ಯಾನಿಟೈಸರ್ ಸಿಂಪಡಿಸುವ ಮೂಲಕ ಕಾರ್ಯೋನ್ಮುಖ ರಾಗಿದ್ದಾರೆ. ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು ಜ್ವರ ತಪಾಸಣೆಯಲ್ಲಿ ತೊಡಗಿದ್ದಾರೆ.