*ಗೋಣಿಕೊಪ್ಪಲು, ಜು. 19: ವೀರಾಜಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದರು.

ಪೆÇನ್ನಂಪೇಟೆ ಸಾಮಥ್ರ್ಯಸೌಧ ಸಭಾಂಗಣದಲ್ಲಿ ಕೋವಿಡ್-19 ಪ್ರಕರಣಗಳು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಶಾಸಕರು ಹಲವು ಸಲಹೆ ಸೂಚನೆಗಳನ್ನು ನೀಡುವ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ತಹಶೀಲ್ದಾರ್ ನಂದೀಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಷಣ್ಮುಗ, ತಾಲೂಕು ಉಪ ಪೆÇಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಗೋಣಿಕೊಪ್ಪಲು ವೃತ್ತ ನಿರೀಕ್ಷಕ ರಾಮಿರೆಡ್ಡಿ, ಗ್ರಾಮ ಲೆಕ್ಕಾಧಿಕಾರಿ ರಾಧಾಕೃಷ್ಣ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.