ಕೂಡಿಗೆ, ಜು 18: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಬೆಂಗಳೂರಿನಿಂದ ಬಂದ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭುವನಗಿರಿ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ತಾಲೂಕು ವ್ಯೆದ್ಯಾಧಿಕಾರಿ ಶ್ರೀನಿವಾಸ್, ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಭರತ್, ಕಂದಾಯ ಪರಿವೀಕ್ಷಕ ಮಧುಕುಮಾರ್ ಕೂಡಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಇದ್ದರು.