ಕೂಡಿಗೆ, ಜು.18: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೂಸೂರು ಗ್ರಾಮದ ಶಶಿಕಲಾ ಯೋಗೇಶ್ ಎಂಬವರಿಗೆ ಸೇರಿದ ಮನೆ ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ನಷ್ಟವಾಗಿದೆ. ಸ್ಥಳಕ್ಕೆ ಕುಶಾಲನಗರ ಕಂದಾಯ ಇಲಾಖೆಯ ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.