ಮಡಿಕೇರಿ, ಜು. 19: ಪ್ರಸಕ್ತ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ಧೋಬೊ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೆÇೀಟೊ ಮತ್ತು ವಿದ್ಯಾರ್ಥಿಗಳ ವ್ಯಾಸಾಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿ ಮತ್ತು ಸಣ್ಣ ರೈತರ ಪ್ರಮಾಣ ಪತ್ರ ಸಲ್ಲಿಸಬೇಕು. ನಿಗಮದ ವೆಬ್ಸೈಟ್ ಜbಛಿಜಛಿಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸುವುದು.
ಪದವಿ ವ್ಯಾಸಂಗ ಮಾಡಲು ದಾಖಲಾತಿಗಾಗಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು ಆವರಣ ಇಲ್ಲಿ 2020-21ನೇ ಸಾಲಿನ ಬಿ.ಎ (ಹೆಚ್ಇಪಿ) ಬಿ.ಎ (ಹೆಚ್ಇಎಸ್), ಬಿ.ಕಾಂ, ಬಿಬಿಎ ಪದವಿ ವ್ಯಾಸಂಗ ಮಾಡಲು ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಥಳೀಯ ಶಾಸಕರ ನೇತೃತ್ವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸಕ್ರಿಯ ಚಟುವಟಿಕೆ, ಹಲವಾರು ವಿದ್ಯಾರ್ಥಿವೇತನ ಸೌಲಭ್ಯಗಳು, ಶಿಕ್ಷಕ ಮತ್ತು ಪೋಷಕರೊಂದಿಗೆ ಉತ್ತಮ ಭಾಂದವ್ಯ, ಉದ್ಯೋಗ ಮಾರ್ಗದರ್ಶನ ಕೇಂದ್ರದ ವತಿಯಿಂದ ಕ್ಯಾಂಪಸ್ ಆಯ್ಕೆ, ದೂರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ಸೌಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08272-223913, 8277167074 ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.