ಮಡಿಕೇರಿ, ಜು. 19: ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ವೃತ್ತಿ ತರಬೆÉೀತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ- 08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.