ಕೂಡಿಗೆ, ಜು. 19: ತೊರೆನೂರು ಗ್ರಾಮದಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಇತ್ತೀಚೆಗೆ ಮೃತಪಟ್ಟಿದ್ದರು. ಅಲ್ಲದೆ ಈ ಗ್ರಾಮದಲ್ಲಿ ಹಲವು ಕೊರೊನಾ ಪ್ರಕರಣಗಳು ಇರುವುದರಿಂದ ಗ್ರಾಮಕ್ಕೆ ಪೂರ್ತಿಯಾಗಿ ಸ್ಯಾನಿಟೈಸರ್ ಸಿಂಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನರನ್ನು ಈಗಾಗಲೇ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕುಶಾಲನಗರ ಅಗ್ನಿಶಾಮಕದಳದ ವತಿಯಿಂದ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಗ್ರಾಮಸ್ಥರಾದ ಜಗದೀಶ್, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಎಸ್. ಕೃಷ್ಣ ಗೌಡ, ಸಂಘ ನಿರ್ದೇಶಕರಾದ ಟಿ.ಕೆ. ಪಾಂಡುರಂಗ, ಚಂದ್ರಪ್ಪ ಸೇರಿದಂತೆ ಸೋಂಕಿತ ವ್ಯಕ್ತಿಯ ಕುಟುಂಬದವರು ಆಗ್ರಹಿಸಿದ್ದಾರೆ.