ಸಿದ್ದಾಪುರ, ಜು.20: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಮಿನಿ ಲಾರಿಯನ್ನು ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದಲ್ಲಿ ಮುಟ್ಟುಗೋಲು ಹಾಕಲಾಯಿತು. ಸಿದ್ದಾಪುರದಿಂದ ಮಿನಿಲಾರಿ ಒಂದರಲ್ಲಿ ಪ್ಲಾಸ್ಟಿಕ್ ಮುಚ್ಚಿ ಮರಗಳ ದಿಮ್ಮಿಗಳನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಪೆÇಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಈ ಹಿಂದೆ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಗಳಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಕಾನೂನು ಉಲ್ಲಂಘನೆ ಮಾಡಿ ಮರ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಕಾನೂನು ಉಲ್ಲಂಘನೆ ಮಾಡಿ ಮರಸಾಗಾಟ ಮಾಡಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಎಚ್ಚರಿಕೆಯನ್ನು ನೀಡಿದ್ದಾರೆ