ಸಿದ್ದಾಪುರ, ಜು. 20: ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿದ್ದಾಪುರ ಪೆÇಲೀಸ್ ಠಾಣೆಯಲ್ಲಿ ಸಾರ್ವಜನಿಕರ ದೂರು ಅರ್ಜಿಯನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಸಿದ್ದಾಪುರದ ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಇತ್ತೀಚೆಗೆ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿದ್ದಾಪುರ ಠಾಣೆಯಲ್ಲಿ ದೂರು ಅರ್ಜಿದಾರರಿಗೆ ಠಾಣೆ ಎದುರು ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. É ಠಾಣೆಗೆ ಪುಕಾರು ನೀಡಲು ಬರುವ ವ್ಯಕ್ತಿಗಳು ಮಾಸ್ಕ್ ಧರಿಸಿಕೊಂಡು ಬರುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ನಾಮಫಲಕವನ್ನು ಕೌಂಟರಿನ ಮುಂದೆ ಅಳವಡಿಸಲಾಗಿದೆ. ದೂರುದಾರರು ಈ ಬಗ್ಗೆ ಆದೇಶವನ್ನು ಪಾಲಿಸಲು ಸೂಚಿಸಲಾಗಿದೆ.