ಸೋಮವಾರಪೇಟೆ, ಜು. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಂತಳ್ಳಿ ವಲಯಕ್ಕೆ ಒಳಪಡುವ ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ದಿನ ಕಾರ್ಯಕ್ರಮ ನಡೆಯಿತು. ಯೋಜನೆಯ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪದ್ಮಾವತಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ರೇಣುಕ, ಶಾಲಾ ಮುಖ್ಯೋಪಾಧ್ಯಾಯಿನಿ ತೆರೇಸಾ ಮೇರಿ, ಶಿಕ್ಷಕಿ ಸಾಕಮ್ಮ, ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಉಪಸ್ಥಿತರಿದ್ದು, ಶಾಲೆಯ ಸುತ್ತಮುತ್ತ ಗಿಡಗಳನ್ನು ನೆಟ್ಟರು.