ಸವಿತಾ ಸಮಾಜಕ್ಕೆ: ಪ್ರಸಕ್ತ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಸಮಾಜದವರು ಉಚಿತವಾಗಿ ಅರ್ಜಿ ನಮೂನೆ ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೆÇೀಟೊ ಮತ್ತು ಇತರ ದಾಖಲಾತಿಗಳನ್ನ ನಿಗಮದ ವೆಬ್‍ಸೈಟ್ ಜbಛಿಜಛಿಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಿಗಮದಿಂದ ಅರ್ಹ ಫಲಾನುಭವಿಗಳಿಗೆ: ಪ್ರಸಕ್ತ 2020-21ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿತ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ ಜಾತಿಗೆ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ ವಿಳಾಸ hಣಣಠಿs://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಸಹ ಸಲ್ಲಿಸಬಹುದು. ಅರ್ಜಿಯಲ್ಲಿ ನಮೂದಿಸಿರು ವಂತಹ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನವಾಗಿದೆ.
ಯೋಜನೆಗಳು: ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯಗಳಲ್ಲಿ ಹೆಚ್ಚಿನ ಘಟಕ ವೆಚ್ಚವಿರುವ ಉದ್ಯಮಗಳಾದ ಆಟೋರಿಕ್ಷಾ, ಬೇಕರಿ, ಹೊಟೇಲ್, ಕಂಪ್ಯೂಟರ್ ಘಟಕ, ಹಿಟ್ಟಿನ ಗಿರಣಿ, ಆಟೋಮೊಬೈಲ್ ಗ್ಯಾರೇಜ್, ಮೊಬೈಲ್ ರಿಪೇರಿ ಅಂಗಡಿ, ಇಟ್ಟಿಗೆ ಉದ್ಯಮ ಮತ್ತಿತರ ಹೆಚ್ಚಿನ ಘಟಕ ವೆಚ್ಚವಿರುವ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಿ ನಡೆಸಲು ಬ್ಯಾಂಕ್‍ಗಳಿಂದ ಸಾಲ ಮತ್ತು ನಿಗಮದಿಂದ ಸಹಾಯಧನ ಒದಗಿಸಲು ಚೈತನ್ಯ ಸಬ್ಸಿಡಿ-ಕಂ-ಸಾಪ್ಟ್ ಲೋನ್ ಯೋಜನೆಯನ್ನು ರೂಪಿಸಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ: ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷದವರೆಗೆ ಆರ್ಥಿಕ ನೆರವು. ಈ ಮೊತ್ತದಲ್ಲಿ ಶೇ. 30 ರಿಂದ 15 ರವರೆಗೆ ಸಹಾಯಧನ ಉಳಿಕೆ ಮೊತ್ತ ಶೇ. 4 ರ ಬಡ್ಡಿ ದರದಲ್ಲಿ ಸಾಲ ಲಭಿಸಲಿದೆ. ಈ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಸಮುದಾಯದ ಫಲಾಪೇಕ್ಷಿಗಳು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಡಿಕೇರಿ ಇಲ್ಲಿ ಉಚಿತವಾಗಿ ಸಂಬಂಧಿಸಿದ ಯೋಜನೆಯ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 12 ರೊಳಗೆ ಸಲ್ಲಿಸುವುದು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪೇಶ್ ಇಮಾಮ್-ಮೌಜóನ್‍ಗಳಿಗೆ ಗೌರವಧನಕ್ಕಾಗಿ: ಜಿಲ್ಲಾ ವಕ್ಫ್ ಮಂಡಳಿಯಲ್ಲಿ ನೊಂದಾಯಿಸಲ್ಪಟ್ಟ ಸಂಸ್ಥೆಗಳಲ್ಲಿ 10 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿರುವ 65 ವರ್ಷ ಮೇಲ್ಪಟ್ಟ ಪೇಶ್ ಇಮಾಮ್ ಮತ್ತು ಮೌಜûನ್‍ಗಳಿಗೆ ತಮ್ಮ ವಯೋಕಾಲದಲ್ಲಿ ಚಾಲ್ತಿಯಲ್ಲಿರುವ ಗೌರವಧನದ ಶೇ. 50 ರಷ್ಟನ್ನು ಪ್ರತಿ ತಿಂಗಳು ಗೌರವಧನವಾಗಿ ನೀಡಲು ಪ್ರಸ್ತಾಪಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ವಾರ್ಷಿಕ ಆದಾಯ ರೂ. 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಬಿ.ಪಿ.ಎಲ್. ಕಾರ್ಡ್ ಹೊಂದಿರತಕ್ಕದ್ದು, ಅರ್ಹ ಪೇಶ್ ಇಮಾಮ್ ಮತ್ತು ಮೌಜóನ್‍ಗಳು ನಿಗದಿತ ನಮೂನೆ ಅರ್ಜಿಗಳನ್ನು ಮಂಡಳಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ವಯಸ್ಸಿನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ವಿದ್ಯಾರ್ಹತೆ ಪ್ರತಿ ಮುಂತಾದ ಸೇವೆ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ವಾಸ ಸ್ಥಳ ದಾಖಲೆ, ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ಲಗತ್ತಿಸಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಸಮೀಪ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ವಕ್ಫ್ ಅಧಿಕಾರಿ ತಿಳಿಸಿದ್ದಾರೆ.