ಮಡಿಕೇರಿ, ಜು. 21: ಸರ್ಕಾರಿ ಪ್ರ್ರೌಢಶಾಲಾ ಗ್ರೇಡ್-2 ಸಹ ಶಿಕ್ಷಕರ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್, 3 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಸಮಂಜಸವಾದ ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಉಪ ನಿರ್ದೇಶಕರ ಕಚೇರಿಗೆ, ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೊ ತಿಳಿಸಿದ್ದಾರೆ.