ಸಿದ್ದಾಪುರ, ಜು. 21 : ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಹಿಳೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಪಿ.ಆರ್. ಭರತ್ ಪದಾಧಿಕಾರಿಗಳಾದ ಜೋಶ್ ಮೋನಪ್ಪ ಇನ್ನಿತರರು ಹಾಜರಿದ್ದರು. ನಂತರ ಪಂಚಾಯ್ತಿ ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.