ಮಡಿಕೇರಿ, ಜು. 21: ಸಂಕಷ್ಟವನ್ನು ಎದುರಿಸುತ್ತಿರುವ ಕೊರೊನಾ ಸೋಂಕಿತರು ಹಾಗೂ ಸೀಲ್‍ಡೌನ್ ಪ್ರದೇಶಗಳ ಜನಸಾಮಾನ್ಯರ ಸಮಸ್ಯೆಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಲು ಸಾಧ್ಯವಾಗದಿದ್ದಲ್ಲಿ ಜಿಲ್ಲೆಯ ಶಾಸಕರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೀಲ್ ಡೌನ್ ಪ್ರದೇಶಗಳಲ್ಲಿರುವ ಜನರ ಅಗತ್ಯತೆಗಳನ್ನು, ಸಂಕಷ್ಟಗಳನ್ನು ಗಮನಿಸಿ ಸೂಕ್ತ ಸ್ಪಂದನ ನೀಡುವ ಕಾರ್ಯ ಶಾಸಕರುಗಳಿಂದ ನಡೆಯುತ್ತಿಲ್ಲವೆಂದು ಟೀಕಿಸಿದರು.

ಸೋಂಕಿತ ವ್ಯಕ್ತಿಯನ್ನು ಮನೆಗೆ ಕಳುಹಿಸಿ ಕ್ವಾರಂಟೈನ್‍ಗೆ ಸೂಚಿಸಿ, ಆತನಿರುವ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ನಂತರದ ಅವಧಿಯಲ್ಲಿ ಆ ಪ್ರದೇಶದ ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪÀಂದಿಸುವ ಕಾರ್ಯದಿಂದ ಜಿಲ್ಲಾಡಳಿತ ನುಣುಚಿಕೊಳ್ಳುತ್ತಿದೆ. ಸಾಕಷ್ಟು ಸೀಲ್ ಡೌನ್ ಪ್ರದೇಶಗಳಲ್ಲಿ ಸಣ್ಣ ರೈತÀರು, ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಇಂತಹ ಬಡ ಮಂದಿಯ ಪರಿಸ್ಥಿತಿಗಳನ್ನು ಅರಿಯುವ ಪ್ರಯತ್ನ ಆಡಳಿತ ವ್ಯವಸ್ಥೆಯಿಂದ ನಡೆಯುತ್ತಿಲ್ಲ. ಕೊರೊನಾ ಸಂಕಷ್ಟದಿಂದ ನಾವು ಪಾರಾಗಬೇಕಾದರೆ ಜಿಲ್ಲೆಯ ಜನರು, ಜನಪ್ರತಿನಿಧಿಗಳು, ಆಡಳಿತ ವ್ಯವಸ್ಥೆ ಒಂದಾಗಿ ಕಾರ್ಯನಿರ್ವಹಿಸುವ ಅಗತ್ಯತೆ ಇದೆ ಎಂದು ಗಣೇಶ್ ಅಭಿಪ್ರಾಯಪಟ್ಟರು.

ಕೊರೊನಾ ಮಹಾಮಾರಿ ವ್ಯಾಪಿಸುತ್ತಿರುವ ಈ ಹಂತದಲ್ಲಿ ಜಿಲ್ಲೆಯ ಜನರ ಸಂಕಷ್ಟಗಳಿಗೆ ಸಂದಿಸುವ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಗೆ ಆಗಮಿಸಿ ಸಭೆಗಳನ್ನು ನಡೆಸಿ ತೆರಳುತ್ತಿದ್ದಾರೆಯೇ ಹೊರತು ಅವರಿಂದ ಜನರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಇಂತಹ ಉಸ್ತುವಾರಿ ಸಚಿವರು ಕೊಡಗಿಗೆ ಅಗತ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಜಿಲ್ಲಾಡಳಿತಕ್ಕೆ ಜಿಲ್ಲೆಯ ಸಂಪೂರ್ಣ ಉಸ್ತುವಾರಿಯನ್ನು ನೀಡಲಿ ಎಂದು ಒತ್ತಾಯಿಸಿದರು.

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಜಿಲ್ಲಾ ಕಾರ್ಯದರ್ಶಿ ಸುನಿಲ್, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಮಡಿಕೆÉೀರಿ ತಾಲ್ಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್ ಹಾಗೂ ವೀರಾಜಪೇಟೆ ನಗರಾಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.