ಮಡಿಕೇರಿ, ಜು. 21: ಕರ್ನಾಟಕ ರಾಜ್ಯಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ-2020 (ಸಿ.ಇ.ಟಿ) ತಾ. 30 ಮತ್ತು ತಾ. 31 ರಂದು ನಡೆಯುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಯು ಈ ಕೆಳಕಂಡ 5 ಕೇಂದ್ರಗಳಲ್ಲಿ ನಡೆಯಲಿದೆ. ಸಂತ ಜೋಸೆಫರ ಬಾಲಕಿಯರ ಪದವಿ ಪೂರ್ವ ಕಾಲೇಜು, ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ವೀರಾಜಪೇಟೆ, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಕೋವಿಡ್ ಕೇರ್ ಸೆಂಟರ್ (ಒಂದು ವೇಳೆ ಕೋವಿಡ್ ಸೋಂಕಿತ ಪರೀಕ್ಷಾರ್ಥಿಗಳು ಇದ್ದಲ್ಲಿ ಮಾತ್ರ) ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿಯವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಉಪವಿಭಾಗಾಧಿಕಾರಿ ವೃಂದಕ್ಕೆ ಸಮನಾದ ಅಧಿಕಾರಿಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳನ್ನು ಸೋಂಕು ನಿವಾರಕಗೊಳಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿದ ನಂತರ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು.ಪರೀಕ್ಷಾರ್ಥಿಗಳು ಕಡ್ಡಾಯವಾಗಿ ಮುಖ ಗವಸುಗಳನ್ನು ಧರಿಸಿ ಬರತಕ್ಕದ್ದು.

ಪರೀಕ್ಷಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದಲ್ಲಿ, ಅವರ ಆರೋಗ್ಯ ಉತ್ತಮವಾಗಿದ್ದಲ್ಲಿ ಅವರಿಗೆ ಮಡಿಕೇರಿಯ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ಬಗ್ಗೆ ಪರೀಕ್ಷಾರ್ಥಿಯು ಮೊದಲೇ ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಬೇಕಾಗುವುದು.

ಕೋವಿಡ್ ಸೋಂಕಿತರ ಪ್ರಾಥಮಿಕ/ದ್ವಿತೀಯ ಸಂಪರ್ಕಿತ ಪರೀಕ್ಷಾರ್ಥಿಗಳು

(ಮೊದಲ ಪುಟದಿಂದ) ಮತ್ತು ನಿಯಂತ್ರಿತ ಪ್ರದೇಶದಿಂದ ಪರೀಕ್ಷೆ ಬರೆಯಲು ಬರುವ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿಯೇ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು.

ನಿಯಂತ್ರಿತ ಪ್ರದೇಶದಿಂದ ಪರೀಕ್ಷೆ ಬರೆಯಲು ಬರುವ ಪರೀಕ್ಷಾರ್ಥಿ ಗಳೊಂದಿಗೆ ಒಬ್ಬ ಪೆÇೀಷಕರು ಮಾತ್ರ ಬರಲು ಅವಕಾಶ ಇರುತ್ತದೆ. ನಿಯಂತ್ರಿತ ಪ್ರದೇಶದಿಂದ ಪರೀಕ್ಷೆ ಬರೆಯಲು ಬರುವ ಪರೀಕ್ಷಾರ್ಥಿಗಳು ಮುಂಚಿತವಾಗಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆ/ಗ್ರಾಮ ಪಂಚಾಯತಿ ಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.