ಸೇತುಬಂಧ ಪಠ್ಯ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಲು ಕರೆ

ಕೊಡ್ಲಿಪೇಟೆ, ಜು. 22: ಕೊರೊನಾ ಲಾಕ್‍ಡೌನ್ ಹಿನ್ನೆಲೆ ವಿದ್ಯಾರ್ಥಿಗಳಿಗಾಗಿ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರವಾರವಾಗುತ್ತಿದ್ದು, ಶಾಲೆಗಳಿಂದ ಹೊರಗಿರುವ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿ.ಪಂ. ಸದಸ್ಯ ಪುಟ್ಟರಾಜು ಸಲಹೆ ನೀಡಿದರು.

ಕೊಡ್ಲಿಪೇಟೆ ಕ್ಲಸ್ಟರ್ ಕೇಂದ್ರದಲ್ಲಿ ಮಂಗಳವಾರ ಹೋಬಳಿ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ಉಚಿತವಾಗಿ ನೀಡುವ ಪಠ್ಯ ಪುಸ್ತಕಗಳನ್ನು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರ ಮಾಡಿ ಮಾತನಾಡಿದರು.

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಶಾಲಾ, ಕಾಲೇಜುಗಳನ್ನು ಆರಂಭಿಸಲು ಸಾಧ್ಯವಾಗಿಲ್ಲ. ಇದರಿಂದ ಪೆÇೀಷಕರಲ್ಲಿ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಚಂದನ ವಾಹಿನಿಯಲ್ಲಿ 8 ರಿಂದ 10 ತರಗತಿಗಳಿಗೆ ಸೇತುಬಂಧ ಕಾರ್ಯಕ್ರಮದಲ್ಲಿ ನುರಿತ ಶಿಕ್ಷಕರಿಂದ ಪಾಠಪ್ರವಚನ ನೀಡಲಾಗುತ್ತಿದೆ. ಜೊತೆಗೆ ಅನ್ ಲೈನ್ ತರಗತಿ ಕೂಡ ಆರಂಭಿಸಲು ಸರ್ಕಾರ ಮುಂದಾಗಿದೆ. ಪೆÇೀಷಕರು ಮನೆಯಲ್ಲಿ ಕಾಲಹರಣ ಮಾಡುವ ಬದಲು ಮಕ್ಕಳೊಂದಿಗೆ ಬೆರತು ಕಲಿಕೆಗೆ ಒತ್ತು ನೀಡಬೇಕು ಎಂದರು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಎಸ್.ಎಂ. ಸುರೇಶ್ ಮಾತನಾಡಿ, ಕ್ಲಸ್ಟರ್ ವ್ಯಾಪ್ತಿಯ 9 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಎರಡು ಸರ್ಕಾರಿ ಪ್ರೌಢಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ. ಈ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಅವರ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದರು.

ಈ ಸಂದರ್ಭ ವಿವಿಧ ಶಾಲಾ ಮುಖ್ಯ ಶಿಕ್ಷಕರಾದ ಜಾನಕಮ್ಮ, ಉಷಾ, ಯು.ಡಿ. ಮಂಜುನಾಥ್, ಮಂಜೇಗೌಡÀ, ರಾಧ, ಫಯಾಜ್, ಮುಜಮಿಲ್ ಅಖ್ತರ್, ರಮೇಶ್, ಅಶೋಕ್, ಇತರ ಶಿಕ್ಷಕರು ಹಾಜರಿದ್ದರು.