ಕೂಡಿಗೆ, ಜು. 22: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಹುಲುಸೆ ಗ್ರಾಮದ ಒಂದು ಬೀದಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಭರತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಖೇಶ್ ಗ್ರಾಮ ಲೆಕ್ಕಾಧಿಕಾರಿ ಸಚಿನ್ ಕುಲಕಣೆ ಇದ್ದರು.