ಮಡಿಕೇರಿ, ಜು. 22: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಾ. 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ತಾ. 28 ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲೂಕು ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶಗಳಿಗೆ 2020ರ ಮುಂಗಾರು ಹಂಗಾಮಿನಲ್ಲಿ ನೀರು ಒದಗಿಸುವ ಬಗ್ಗೆ ಹಾರಂಗಿ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 12 ಗಂಟೆಗೆ ಹಾರಂಗಿ ಜಲಾಶಯದಲ್ಲಿ ಕೊರೊನಾ (ಕೋವಿಡ್-19) ನಿರ್ವಹಣೆ ಬಗ್ಗೆ ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.