ಮಡಿಕೇರಿ, ಜು. 22: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ದ್ವಿತೀಯ ಪಿಯುಸಿ. ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ಶೇ.80 ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಲೀಲಾವತಿ ಬಸವರಾಜು 583 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ತಾಸೀನಾ ಎಂ.ಎಸ್. 522 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ವಿನೋದ್ ಕುಮಾರ್ ಶೆಟ್ಟಿ 513 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ತಿಳಿಸಿದ್ದಾರೆ.