ಕೂಡಿಗೆ, ಜು. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಬ್ರಿಟೀಷರ ಕಾಲದ ಗೋ ಸದನ ಜಾಗ ಕೂಡಿಗೆ, ಜು. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಬ್ರಿಟೀಷರ ಕಾಲದ ಗೋ ಸದನ ಜಾಗ ಎಂ.ಪಿ ಅಪ್ಪಚ್ಚು ರಂಜನ್ ಸೂಚನೆ ಮೇರೆಗೆ ಇಂದು ಗ್ರಾಮಸ್ಥರ, ಸಾಮಾಜಿಕ ಅರಣ್ಯ ಇಲಾಖೆ, ಹಾಗೂ ಪಶುಪಾಲನೆ ಇಲಾಖೆಯ ಅಧಿಕಾರಿ ಸಮ್ಮುಖದಲ್ಲಿ ಸರ್ವೆ ಕಾರ್ಯ ನಡೆಯಿತು.ಈ ಸಂದರ್ಭ ಹುದುಗೂರು ಉಮಾಮಹೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಛಾಮಿ, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರೇಮಲೀಲಾ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಐ.ಎಸ್. ಗಣೇಶ್, ಹುದುಗೂರು ಗ್ರಾಮದ ಜನಜಾಗೃತಿ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು, ಯುವಕ ಸಂಘದ ಅಧ್ಯಕ್ಷರು ನಿರ್ದೇಶಕರು ಸೇರಿದಂತೆ ನೂರಾರು ಗ್ರಾಮಸ್ಧರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶಕ. ಡಾ, ಬದಾಮಿ, ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ವಲಯಾದಿ üಕಾರಿ ನಮನ್ ನಾಯಕ್, ಸರ್ವೆ ಇಲಾಖೆಯ ಮುರುಳೀಧರ್ ಹಾಜರಿದ್ದರು.