ಗೋಣಿಕೊಪ್ಪಲು, ಜು. 23: ರೋಟರಿ ಕ್ಲಬ್ ಗೋಣಿಕೊಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಗ್ರಾಮ ಪಂಚಾಯಿತಿ ಪೊನ್ನಂಪೇಟೆ ಇವರ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವು ಹಳ್ಳಿಗಟ್ಟುವಿನ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ರೋಟರಿ ಕ್ಲಬ್ನ ಅಧ್ಯಕ್ಷರಾದ ಮೂಕಳೇರ ಬೀಟಾ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಕಳೇರ ರಮೇಶ್, ಅರಣ್ಯ ಮಹಾವಿದ್ಯಾಲಯದ ಡೀನ್ ಸಿ.ಕುಶಾಲಪ್ಪ, ಕೊಡಗಿನ ದೇವರ ಕಾಡುಗಳ ಬಗ್ಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಕೆ.ಸಿ. ಮುತ್ತಪ್ಪ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೂಕಳೇರ ಸುಮಿತಾ, ಸದಸ್ಯರಾದ ಕಾವ್ಯಮಧು, ಲಕ್ಷ್ಮಣ್, ಅನೀಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮೂಕಳೇರ ಕುಶಾಲಪ್ಪ, ಭದ್ರಕಾಳಿ ದೇವಸ್ಥಾನ ಸಮಿತಿ ಅಧ್ಯಕ್ಷ ಮುತ್ತಣ್ಣ, ಕಾರ್ಯದರ್ಶಿ ರಮೇಶ್, ಅರಣ್ಯ ಮಹಾವಿದ್ಯಾಲಯದ ನಾಣಯ್ಯ ಸೇರಿದಂತೆ ಗ್ರಾಮದ ಜನತೆ ಪಾಲ್ಗೊಂಡಿದ್ದರು.