ಮಡಿಕೇರಿ, ಜು. 23: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಮತ್ತು ಆರ್.ಟಿ.ಐ. ಘಟಕದ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ ದಿ. ಎ.ಕೆ. ಸುಬ್ಬಯ್ಯ ಅವರ ಪುತ್ರ ಎ.ಎಸ್. ಪೆÇನ್ನಣ್ಣ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ಹೈಕೋರ್ಟ್‍ನ ಹಿರಿಯ ವಕೀಲರಾಗಿರುವ ಎ.ಎಸ್. ಪೆÇನ್ನಣ್ಣ ಈ ಹಿಂದೆ ರಾಜ್ಯ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಸ್ವತ್ತು (ರಾಜ್ಯ) ಘಟಕದ ಅಧ್ಯಕ್ಷರಾಗಿ ಕೊಡಗು ಮೂಲದವರಾದ ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರನ್ನು ನೇಮಕಗೊಳಿಸಿ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.