ಮಡಿಕೇರಿ, ಜು. 23: ಮಳೆಹಾನಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಂಡು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5), ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಬೆಂಗಳೂರು/ ಜಾಲ್ಸೂರು ರಾಜ್ಯ ಹೆದ್ದಾರಿಯ ಕಿ.ಮೀ. 240 ರಿಂದ 241 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು 2020 ಸೆಪ್ಟೆಂಬರ್ 6ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಬದಲಿ ಮಾರ್ಗವಾದ ಸೋಮವಾರಪೇಟೆಯ ಜೂನಿಯರ್ ಕಾಲೇಜು, ಚೌಡ್ಲು-ಶಾಂತಳ್ಳಿ ಮಾರ್ಗವಾಗಿ ಹಾಗೂ ಕಕ್ಕೆಹೊಳೆ-ಹಾನಗಲ್ಲುಕೆರೆ-ಬಿಟಿಸಿಜಿ ಕಾಲೇಜು-ಕಲ್ಕಂದೂರು ಮಾರ್ಗವಾಗಿ ಸಂಚರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.