ಶನಿವಾರಸಂತೆ, ಜು. 23: ಸಮೀಪದ ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲುವಾಗಿಲು ಗ್ರಾಮದ ರೈತ ನಾಗಣ್ಣ (58) ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಮಿಷನ್ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.ನಾಗಣ್ಣ ಒಂದು ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬೆಸೂರು ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಲ್ಲಿ ರೂ. 80 ಸಾವಿರ ಸಾಲ ಪಡೆದಿದ್ದಾರೆ. ಇವರಿಗೆ ಅನಾರೋಗ್ಯ ಪೀಡಿತ ಓರ್ವ ಅವಿವಾಹಿತ ಸಾಲ ಬಾಧೆ: ರೈತ ಆತ್ಮಹತ್ಯೆ (ಮೊದಲ ಪುಟದಿಂದ) ಪುತ್ರನಿದ್ದು, ಅನ್ನನಾಳದ ಸಮಸ್ಯೆಯಿದ್ದ ಮತ್ತೋರ್ವ ಪುತ್ರಿಗೆ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿತ್ತು. ಇದರಿಂದಾಗಿ ಒಟ್ಟು ರೂ. 3 ಲಕ್ಷ ಸಾಲವಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಾಲ ಬಾಧೆಯಿಂದ ಬೇಸತ್ತು ಬುಧವಾರ ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದ ನಾಗಣ್ಣರಿಗೆ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹಾಸನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.