ಮಡಿಕೇರಿ, ಜು. 24: ಸಿದ್ದಾಪುರ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ವಾಣಿಜ್ಯ ವಿಭಾಗದಲ್ಲಿ 45 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿದ್ದಾರೆ. ವಿದ್ಯಾರ್ಥಿನಿ ಅಂಜನ್ 536 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಲಾ ವಿಭಾಗದಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 26 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ತೀರ್ಥ 532 ಅಂಕ ಪಡೆದು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಾಲೇಜಿಗೆ ಶೇ. 95.5 ಫಲಿತಾಂಶ ದೊರೆತಿದೆ.