ಕೂಡಿಗೆ, ಜು. 24: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಲೆ ಊರಿನ ಒಳಕ್ಕೆ ಹೋಗುವ ರಸ್ತೆಯ ಕಾಮಗಾರಿಯನ್ನು ನಡೆಸಲು ಕಳೆದ ಐದು ತಿಂಗಳುಗಳ ಹಿಂದೆ ಭೂಮಿ ಪೂಜೆಯನ್ನು ನೆರವೇರಿಸಲಾಗಿತ್ತು. ಆದರೂ ಇದುವರೆಗೂ ಕಾಮಗಾರಿ ನಡೆದಿಲ್ಲ ಎಂದು ಗ್ರಾಮಸ್ಥರ ಆರೋಪವಾಗಿದೆ.
ಹೆಬ್ಬಾಲೆಯ ಮುಖ್ಯ ರಸ್ತೆಯ ಮೂಲಕ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಮೂಲಕ ಪಿರಿಯಾಪಟ್ಟಣ ಮತ್ತು ಹುಣಸೂರು ತಾಲೂಕು ಕೇಂದ್ರಗಳಿಗೆ ಹೋಗುವ ಪ್ರಮುಖ ಮಾರ್ಗವಾಗಿದೆ.
ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಈ ರಸ್ತೆಯು ತೀರಾ ಕೆಸರುಮಯವಾಗಿದೆ. ಅಲ್ಲದೆ ಅನೇಕ ಗುಂಡಿಗಳು ಬಿದ್ದಿರುವುದರಿಂದ. ವಾಹನಗಳು ಸಹ ಚಾಲಿಸಲು ಸಾದ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಮರು ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿಯನ್ನು ಪ್ರಾರಂಭ ಮಾಡಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.