ಸೋಮವಾರಪೇಟೆ, ಜು. 24: ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಸಾರ್ವಜನಿಕರು ಅಬಕಾರಿ ಇಲಾಖೆಗೆ ದೂರು ನೀಡಿದ್ದಾರೆ.

ಕೂಲಿ ಕಾರ್ಮಿಕರೇ ಅಧಿಕವಿರುವ ಬಜೆಗುಂಡಿ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಹಲವಾರು ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಈ ಕುರಿತಾಗಿ ಈಗಾಗಲೇ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.